ಕಾರವಾರ : ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಹೊನ್ನಾವರದಲ್ಲಿ ೪, ಕುಮಟಾದಲ್ಲಿ ೨ ಮತ್ತು ಅಂಕೋಲಾದಲ್ಲಿ ೧ ಸೇರಿದಂತೆ ಒಟ್ಟು ೭ ಕಾಳಜಿ ಕೆಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ೨೩೦ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಇದನ್ನೂ ಓದಿ : ಮೂರು ತಾಲೂಕುಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದೆ. ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಕುಮಟಾ ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ ಆರ್ದ್ರಾ ಮಳೆ
ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ೨೪*೭ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ನೂತನ ಎಸ್ಪಿ ನಾರಾಯಣ ಸಂಕಲ್ಪ