ಕಾರವಾರ : ಉತ್ತರ ಕನ್ನಡ ಕ್ಷೇತ್ರದಲ್ಲಿ ಮೇ ೭ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ ೧೩ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ಇದನ್ನೂ ಓದಿ : ೧೩ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು(ಏ.೨೨) ಯಾವುದೇ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದಿಲ್ಲ.
ಅಂತಿಮ ಕಣದಲ್ಲಿ ಇರುವ ಅಭ್ಯರ್ಥಿಗಳ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ ಕಾಗೇರಿ ವಿಶ್ವೇಶ್ವರ ಹೆಗಡೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟ್ರ ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ, ನಿರಂಜನ್ ಉದಯಸಿನ್ಹಾ ಸರ್ದೇಸಾಯಿ, ನಾಗರಾಜ ಅನಂತ ಶಿರಾಲಿ, ಅರವಿಂದ ಗೌಡ, ಅವಿನಾಶ್ ನಾರಾಯಣ ಪಾಟೀಲ, ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.