ಯಲ್ಲಾಪುರ : ಭಾರತೀಯ ಜನತಾ ಪಾರ್ಟಿಯ ಹಿರಿಯರಾಗಿದ್ದ ಅನಂತ ನಾಗರಜಡ್ಡಿ ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ೭೨ನೇ ವಯಸ್ಸಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ : ಪ್ರಾಣಿ – ಪಕ್ಷಿಗಳಿಗೆ ನೀರುಣಿಸುತ್ತಿರುವ ಪೊಲೀಸ್, ಅರಣ್ಯ ಇಲಾಖೆ

ಅನಂತ ನಾಗರಜಡ್ಡಿಯವರು ಬಿಜೆಪಿಯಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದರು. ಆ ಸಂದರ್ಭದಲ್ಲಿ ಎರಡು ಅವಧಿಗೆ ಯಲ್ಲಾಪುರ ತಾಲೂಕಿನ ಇಡಗುಂದಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಐದು ವರ್ಷಗಳ ಕಾಲ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ಅನೇಕ ಅಭಿವೃಧ್ದಿ ಕೆಲಸಗಳನ್ನು ಮಾಡಿ ಹೆಸರುವಾಸಿಯಾಗಿದ್ದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕೋಣೆಮನೆ ಸಂತಾಪ :

ಹರಿಪ್ರಕಾಶ ಕೋಣೆಮನೆ

ನಾಗರಜಡ್ಡಿ ಅವರ ನಿಧನಕ್ಕೆ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ತೀವ್ರ ಸಂತಾಪ ವ್ಯಕ್ತಡಿಸಿದ್ದಾರೆ. ಅಗಲಿದ ಹಿರಿಯರ ಆತ್ಮಕ್ಕೆ ಸದ್ಗತಿ ಕೋರಿ, ಭಗವಂತ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಅವರು ಪ್ರಾರ್ಥಿಸಿದ್ದಾರೆ.