ಕಾರವಾರ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಗ್ರಾಪಂಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದರು.
ಇದನ್ನೂ ಓದಿ : EXPO-2024: ವಿದ್ಯಾರ್ಥಿಗಳ ವಿಜ್ಞಾನ ಮಾದರಿ ಪ್ರದರ್ಶನ ಉದ್ಘಾಟನೆ
ಮೊದಲಿಗೆ ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರೊಟ್ಟಿ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು. ಎನ್‌ಆರ್‌ಎಲ್‌ಎಂ ಯೋಜನೆಯಡಿ ಶ್ರೀದೇವಿ ಸ್ರ್ತೀ ಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ನಡೆಸುತ್ತಿರುವ ಘಟಕದಲ್ಲಿ ರೊಟ್ಟಿ ತಯಾರಿಕೆ ವಿಧಾನ ಹಾಗೂ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು.
ಈ ವಿಡಿಯೋ ನೋಡಿ : ಸರ್ಕಾರಿ ನೌಕರರ ವಾಲಿಬಾಲ್ ಪಂದ್ಯಾವಳಿ https://www.facebook.com/share/v/6gGUyzVTqNCWagi1/?mibextid=oFDknk
ನಂತರ ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಣವಂತಿ ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿದರು. ಮಕ್ಕಳ ಕಲಿಕಾ ಪ್ರಕ್ರಿಯೆ ಕುರಿತು ಶಿಕ್ಷಕರು, ಗ್ರಾಮಸ್ಥರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು. ಹಾಗೆಯೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಮಕ್ಕಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮಕ್ಕಳ ಕಲೆಗೆ ಪ್ರಶಂಸೆ ವ್ಯಕ್ತಪಡಿಸಿದರು.
ತದನಂತರ ಚಿತ್ತಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ನಡೆಸುತ್ತಿರುವ ಮಧುವನ ಜೇನು ಕೃಷಿ ಘಟಕಕ್ಕೆ ಭೇಟಿ ನೀಡಿದರು. ಜೇನು ಕೃಷಿ ಕುರಿತಾದ ಪ್ರಾತ್ಯಕ್ಷಿಕೆ ವೀಕ್ಷಿಸಿ ರೈತರಿಂದ ಅಗತ್ಯ ಮಾಹಿತಿ ಪಡೆದರು.
ಇದಾದ ನಂತರ ಭಟ್ಕಳ ತಾಲ್ಲೂಕಿನ ಬೈಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಜೆಜೆಎಂ ಯೋಜನೆಯ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರುಗಳು ಉಪಸ್ಥಿತರಿದ್ದರು.