ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ ೧೬೯ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂ.೨೭ರಿಂದ ಸೆ.೧೫ರವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ನಿಷೇಧಿಸಲಾಗಿದೆ. ಇದಕ್ಕಾಗಿ ಬದಲಿ ಮಾರ್ಗ ಗುರುತಿಸಲಾಗಿದೆ.

ಇದನ್ನೂ ಓದಿ : ಮುರುಡೇಶ್ವರದ ಬೀನಾ ವೈದ್ಯ ಶಾಲೆಗೆ ಎರಡು ಪ್ರಶಸ್ತಿ

ಬದಲಿ ಮಾರ್ಗ :
ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ವಾಹನಗಳು ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದ ಮೂಲಕ ಸಂಚಾರ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.