ಯಲ್ಲಾಪುರ : ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದು ಸತತ ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ.
ಇದನ್ನೂ ಓದಿ : ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೮.೪೮ ಫಲಿತಾಂಶ
ಪರೀಕ್ಷೆಗೆ ಕುಳಿತ ಎಲ್ಲ ೩೫ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , ೨೨ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಮತ್ತು ೩ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣೇಶ ಶಾಂತಾರಾಮ ದೇಸಾಯಿ ೫೮೭ (೯೩.೯೨%) ಅಂಕ ಗಳಿಸಿ ಪ್ರಥಮ ಸ್ಥಾನವನ್ನು, ನಂದಿತಾ ಮಹೇಶ ತಾಮ್ಸೆ ೫೮೩ (೯೩.೨೮%) ಅಂಕ ಗಳಿಸಿ ದ್ವಿತೀಯ ಸ್ಥಾನ ಮತ್ತು ಸುಬ್ರಹ್ಮಣ್ಯ ನಾರಾಯಣ ಭಟ್ಟ ೫೭೧ (೯೧.೩೬%) ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.
ಇದನ್ನೂ ಓದಿ : ವಿಶ್ವದರ್ಶನ ಪ್ರೌಢಶಾಲೆಗಳ ಉತ್ತಮ ಸಾಧನೆ; ಹರಿಪ್ರಕಾಶ ಕೋಣೆಮನೆ ಸಂತಸ
ಇಡಗುಂದಿಯ ವಿಶ್ವದರ್ಶನ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.