ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರಗಳ ಸಲ್ಲಿಕೆಗೆ ಮೊದಲ ದಿನವಾದ ಇಂದು(ಏ.೧೨) ಉತ್ತರ ಕನ್ನಡ ಕ್ಷೇತ್ರದಲ್ಲಿ ೪ ಅಭ್ಯರ್ಥಿಗಳಿಂದ ೭ ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ : ಅಪಪ್ರಚಾರ ಬಿಟ್ಟರೆ ಬಿಜೆಪಿ ಮಾಡಿದ್ದೇನಿಲ್ಲ: ಮಂಕಾಳ ವೈದ್ಯ ವಾಗ್ದಾಳಿ

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಪಕ್ಷದ ಗಣಪತಿ ಹೆಗಡೆ ೨ ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಹೆಗಡೆ ವಿಶ್ವೇಶ್ವರ ೩ ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿಯ ವಿನಾಯಕ ನಾಯ್ಕ್ ಹಾಗೂ ಪಕ್ಷೇತರ ಅಭ್ಯರ್ಥಿ ಕ್ರಿಶನ್ ಹನುಮಂತಪ್ಪ ಬಳೇಗಾರ ತಲಾ ೧ ನಾಮಪತ್ರ ಸಲ್ಲಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಉತ್ತರ ಕನ್ನಡ ಕ್ಷೇತ್ರದಲ್ಲಿ ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ ೧೯ ಕೊನೆಯ ದಿನವಾಗಿದೆ. ೨೦ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ೨೨ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ ೭ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.