ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ಏಪ್ರಿಲ್ ೧೦ರಿಂದ ೧೫ರೊಳಗೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ : ಡಿಸಿ ಕಚೇರಿಗೆ ಬಂದ ಹಸು, ಪೂಜೆ ಸಲ್ಲಿಸಿ ಸ್ವಾಗತಿಸಿದ ಜಿಲ್ಲಾಧಿಕಾರಿ

ಮಾ.೨೫ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಮಾ.೧ರಿಂದ ೨೨ರವರೆಗೆ ನಡೆದಿತ್ತು. ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ. ಏಪ್ರಿಲ್ ೧೦ರಿಂದ ೧೫ರೊಳಗೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಕಾರ್ಯೋನ್ಮುಖವಾಗಿದೆ.

ನಿರಂತರ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಇದರ ಜತೆಗೆ ೫, ೮ ಮತ್ತು ೯ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಸಹ ತಾಲೂಕು ಹಂತದಲ್ಲಿ ನಡೆಯುತ್ತಿದೆ. ಇದರ ಫಲಿತಾಂಶ ಸಹ ಏ.10ಕ್ಕೆ ಪ್ರಕಟವಾಗುವ ಸಾಧ್ಯತೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ವ್ಯಕ್ತಪಡಿಸಿದೆ.

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ೨೦೨೩-೨೪ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶವನ್ನು ಮಾರ್ಚ್ ೩೦ರಂದು ಪ್ರಕಟಿಸಿತ್ತು. ಅದರ ಪರೀಕ್ಷೆ ಫೆ.೧೨ ರಿಂದ ೨೭ರ ವರೆಗೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಪರೀಕ್ಷೆ ಬರೆಯಲಾಗದವರಿಗೆ ಮೇ ತಿಂಗಳಲ್ಲಿ ಸಪ್ಲಿಮೆಂಟರಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದರ ವೇಳಾಪಟ್ಟಿಯನ್ನೂ ಈಗಾಗಲೇ ಪ್ರಕಟಿಸಲಾಗಿದೆ.