ಕಾರವಾರ : ಜಿಲ್ಲೆಯಲ್ಲಿ ಏಪ್ರಿಲ್ 8ರಂದು  ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯಾದಲ್ಲಿ ಕೆಲವು ದಿನಗಳ ಮಟ್ಟಿಗೆ ಸಮಸ್ಯೆ ಕಡಿಮೆಯಾಗಲಿದೆ. ಅಂಕೋಲಾ ಮತ್ತು ಕಾರವಾರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಯಿರುವುದರಿಂದ ಏಪ್ರಿಲ್ ೮ರಿಂದ ೩ ದಿನಗಳೊಗೊಮ್ಮೆ ನೀರು ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರ ಕನ್ನಡ ಕ್ಷೇತ್ರದಿಂದ ಸ್ವಾಮೀಜಿ ಸ್ಪರ್ಧೆ : ದಿಢೀರ್ ನಿರ್ಧಾರ ಬದಲು

ಅವರು ಇಂದು(ಫೆ.೫) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕೊರೆತಯಾಗದಂತೆ ಮುನ್ನೆಚ್ಚರಿಕೆ ವಹಿಸಿ. ಏಪ್ರಿಲ್ ೮ರಿಂದ ಅಂಕೋಲಾ, ಕಾರವಾರದಲ್ಲಿ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಅನಿವಾರ್ಯ ಎಂದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡುವ ಕುರಿತಂತೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳಿಗೆ ಮತ್ತು ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇದನ್ನೂ ಓದಿ : ಹಿಟ್ ಅಂಡ್ ರನ್ ಅಪಘಾತ ಪ್ರಕರಣಗಳಿಗೂ ಪರಿಹಾರ

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಟೆಂಡರ್ ಕರೆಯುವ ಕುರಿತಂತೆ ಚುನಾವಣಾ ಅಯೋಗ ವಿನಾಯಿತಿ ನೀಡಿದೆ. ಗ್ರಾಮ ಪಂಚಾಯತ್‌ವಾರು ಇ-ಟೆಂಡರ್ ಕರೆದು ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಿ. ಸರ್ಕಾರದ ಮಾರ್ಗಸೂಚಿಯಂತೆ ಪ್ರಸ್ತುತ ಉಪವಿಭಾಗಾಧಿಕಾರಿಗಳು ತಾಲೂಕು ಟಾಸ್ಕ್ ಪೋರ್ಸ್ ಸಮಿತಿಗಳ ಅಧ್ಯಕ್ಷರಾಗಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ತುರ್ತು ಸಭೆಗಳನ್ನು ಕರೆದು ಅಗತ್ಯ ನಿರ್ದೇಶನ ನೀಡುವ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವಂತೆ ತಿಳಿಸಿದರು.
ಟ್ಯಾಂಕರ್ ಮೂಲಕ ನೀರು ನೀಡುವ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಪಡೆಯಬೇಕು. ನೀರು ಸರಬರಾಜು ಮಾಡುವ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಅಳವಡಿಸಬೇಕು. ವಾಹನಗಳ ಟ್ರಿಪ್ ಶೀಟ್ ಗಳನ್ನು ಪಡೆದುಕೊಳ್ಳಬೇಕು. ಪ್ರತ್ಯೇಕ ರಿಜಿಸ್ಟರ್ ನಲ್ಲಿ ಎಲ್ಲಾ ದಾಖಲೆಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಕುರಿತಂತೆ ಬಿಲ್ ಗಳ ಪಾವತಿಗೆ ಸೂಕ್ತ ದಾಖಲಾತಿಗಳ ಅಗತ್ಯವಿದೆ. ಕ್ರಮಬದ್ದವಾಗಿ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಂದು ಎಲ್ಲಾ ತಹಸೀಲ್ದಾರ್ ಮತ್ತು ತಾ.ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.

೬ ಕೋಟಿ ರೂ. ಬಿಡುಗಡೆ :
ಬರ ನಿರ್ವಹಣೆ ಕುರಿತಂತೆ ಸರ್ಕಾರದಿಂದ ಜಿಲ್ಲೆಗೆ ಬಿಡುಗಡೆಯಾಗಿರುವ ಅನುದಾನದಲ್ಲಿ ಈಗಾಗಲೇ ೬ ಕೋಟಿ ರೂ ಗಳನ್ನು ಎಲ್ಲಾ ತಾಲೂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಎಲ್ಲಾ ತಹಸೀಲ್ದಾರ್ ಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದೆ. ಪ್ರಸ್ತುತ ಲಭ್ಯವಿರುವ ಅನುದಾನ ವೆಚ್ಚವಾದಲ್ಲಿ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು. ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅನುದಾನದ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮೇವು ಕೊರತೆಯಿಲ್ಲ :
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಮುಂದಿನ 11 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ. ಯಾವುದೇ ತಾಲೂಕಿನಲ್ಲಿ ಮೇವಿನ ಕೊರತೆಯಿದ್ದಲ್ಲಿ ಅಗತ್ಯ ಪ್ರಮಾಣದಲ್ಲಿ ಸರಬರಾಜು ಮಾಡಲಾಗುವುದು ಎಂದ ಜಿಲ್ಲಾಧಿಕಾರಿ ಮಾನಕರ್, ಜಿಲ್ಲೆಯಾದ್ಯಂತ ಒಟ್ಟು 1446 ಗೋಕಟ್ಟೆಗಳಿವೆ. ಈ ಎಲ್ಲಾ ಗೋಕಟ್ಟೆಗಳಲ್ಲಿ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜಿಲ್ಲೆಯ ಸಾರ್ವಜನಿಕರು ನೀರನ್ನು ಅನಗತ್ಯವಾಗಿ ಪೋಲು ಮಾಡದೇ ತಮ್ಮ ಅವಶ್ಯಕತೆಗನುಗುಣವಾಗಿ ಅತ್ಯಂತ ಮಿತವಾಗಿ ಬಳಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ ಗಳು ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿದ್ದರು.