ಬೆಳಗಾವಿ: ನಗರದ ಕೆ.ಎಲ್. ಸೊಸೈಟಿಯ ಒಂದೇ ಕಾಲೇಜಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಐಶ್ವರ್ಯ ಗುಡದಿನ್ನಿ , ಮೇಘಾ ಸೋಮಣ್ಣನವರ ಮತ್ತು ವಿಕಾಸ್ ದಳವಾಯಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಪ್ರಕಟಿಸಿರುವ ಅಧಿಸೂಚನೆಯಲ್ಲಿ ಈ ಮೂವರ ಹೆಸರುಗಳಿವೆ.
ಇದನ್ನೂ ಓದಿ : ಬೆಂಕಿ ಅವಘಡ : ಭಸ್ಮವಾಯ್ತು ಬಸ್
ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011, 2015 ಮತ್ತು 2016ರ ಅನ್ವಯ 2023ರ ಮಾರ್ಚ್ 9ರಂದು ಸಿವಿಲ್ ನ್ಯಾಯಾಧೀಶರನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿತ್ತು. 2023ರ ನವೆಂಬರ್ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ 30.01.2024 ರಿಂದ 01.02.2024ರ ವರೆಗೆ ನಡೆದ ವೈವಾದಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ ಮೇಲೆ 33 ಮಂದಿ ಅಭ್ಯರ್ಥಿಗಳು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯ ಕಾರ್ಯದರ್ಶಿಯೂ ಆದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಕುಮಾರ್ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಈ ವಿಡಿಯೋ ನೋಡಿ : ಭದ್ರಾವತಿಯಲ್ಲಿ ಚಿರತೆ ಸೆರೆ https://fb.watch/qxrE7XKqDs/?mibextid=Nif5oz
ಒಂದೇ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಈ ಸಾಧನೆಗೆ ಕೆ.ಎಲ್.ಸೊಸೈಟಿ ಅಧ್ಯಕ್ಷ ಅನಂತ ಮಂಡಗಿ, ಕಾಲೇಜಿನ ಆಡಳಿತ ಮಂಡಳಿ ಚೇರ್ಮನ್ ಎಂ.ಆರ್.ಕುಲಕರ್ಣಿ, ಸರ್ವ ಆಡಳಿತ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಹಳೆ ವಿದ್ಯಾರ್ಥಿ ಸಂಘದ ಸಂಯೋಜಕ ಡಾ. ಡಿ. ಪ್ರಸನ್ನಕುಮಾರ್, ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.