ಕಾರವಾರ: ನಿಜವಾದ ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆಗಳನ್ನು ಸಲ್ಲಿಸಿ ಮಂಡಳಿಯಲ್ಲಿ ನೊಂದಾಯಿಸುವುದು ಮತ್ತು ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ. ಇಂತಹ ಕಾರ್ಮಿಕರು ತಾವೇ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗೆ ತೆರಳಿ ಗುರುತಿನ ಚೀಟಿಯನ್ನು ಹಿಂದಿರುಗಿಸುವ ಮೂಲಕ ತಮ್ಮ ನೊಂದಣಿಯನ್ನು ರದ್ದು ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಇದನ್ನೂ ಓದಿ : ಗೃಹಜ್ಯೋತಿ ಗ್ಯಾರಂಟಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಶೇ.100 ಸಾಧನೆ
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಮಿಕರ ಇಲಾಖೆಯ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ನಕಲಿ ಕಾರ್ಮಿಕರು ಈಗಾಗಲೇ ನೊಂದಣಿ ಪತ್ರ ಪಡೆದಲ್ಲಿ ತಕ್ಷಣವೇ ಕಾರ್ಮಿಕ ಇಲಾಖೆ ಕಛೇರಿಗೆ ಹಿಂದಿರುಗಿಸಿ ಸಜ್ಜನರಾಗಬೇಕು. ನಂತರದ ದಿನಗಳಲ್ಲಿ ಒಂದು ವೇಳೆ ನಕಲಿ ಕಾರ್ಮಿಕರೆಂದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಔಷಧಿ ಅಂಗಡಿಗೆ ನುಗ್ಗಿ ಕಳ್ಳತನ
ಕೋರ್ಟ್ ಆವರಣದಲ್ಲಿ ನಡೆದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ್, ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ಮತ್ತು ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.