ಬೆಂಗಳೂರು : ಬಾಕಿ ಉಳಿದಿದ್ದ ರಾಜ್ಯದ ನಾಲ್ಕು ಲೋಕಸಭಾ ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಿದೆ.

ಇದನ್ನೂ ಓದಿ : ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11.23 ಕೋ.ರೂ. ಸಂಗ್ರಹ

ಹೌದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟವಾಗಿದೆ. ಇದರಲ್ಲಿ ಕರ್ನಾಟಕದ ಮೂರು ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಒಂದು ಕ್ಷೇತ್ರದ ಅಭ್ಯರ್ಥಿ ಕಗ್ಗಂಟಾಗಿ ಉಳಿದಿದೆ.

ಈ ರೀಲ್ಸ್ ನೋಡಿ : ಈಶ್ವರಪ್ಪಗೆ ಬಿ ವೈ ರಾಘವೇಂದ್ರ ಸವಾಲು

ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದೆ. ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ. ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕಾರಾಮ ಪಾಲಾಗಿದೆ. ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಸಿಕ್ಕಿದೆ.