ಭಟ್ಕಳ : ಕೃಷಿ ಚಟುವಟಿಕೆ ಮುಗಿಸಿ ಮನೆಗೆ ಬರುತ್ತಿದ್ದಾಗ ಕಾಲು‌ ಜಾರಿ ಬಿದ್ದು ಕೃಷಿಕ ಮೃತಪಟ್ಟ ಘಟನೆ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಹಾಡುವಳ್ಳಿಯ ಮಂಜುನಾಥ ಕುಪ್ಪಯ್ಯ ನಾಯ್ಕ(೬೦) ಮೃತ ದುರ್ದೈವಿ. ಇವರು ಇಂದು(ಜುಲೈ ೭) ಬೆಳಗ್ಗೆ ೬.೪೫ರ ಸುಮಾರಿಗೆ ತೋಟಕ್ಕೆ ಹೋಗಿದ್ದರು. ಕೃಷಿ ಚಟುವಟಿಕೆ ಮುಗಿಸಿ ಮನೆಗೆ ವಾಪಸ್ಸು ಬರುತ್ತಿರುವಾಗ ಕಾಲು‌ ಜಾರಿ ಬಿದ್ದಿದ್ದಾರೆ.

ಇದನ್ನೂ ಓದಿ : ಕುಟುಂಬ ಸಹಿತ ಅಳ್ವೆಕೋಡಿಗೆ ಭೇಟಿ ನೀಡಿದ ಸಚಿವ ಮಂಕಾಳ ವೈದ್ಯ

ಪ್ರಜ್ಞೆ ಕಳೆದುಕೊಂಡ ಅವರನ್ನು ಚಿಕಿತ್ಸೆಗೆ ಭಟ್ಕಳದ ತಾಲೂಕು ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ತರುವ ಮುಂಚೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮೃತರ ಪುತ್ರ ಕೇಶವ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !