ಕಾರವಾರ : ಹೊನ್ನಾವರ ತಾಲೂಕಿನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾಸರಕೋಡು ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ನಡೆಸಲಾಗುತ್ತದೆ. ಸ್ಥಳೀಯರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ವೋಟ್ ಮಾಡಿ : ಉತ್ತರ ಕನ್ನಡ ಕ್ಷೇತ್ರದ ಸಂಸದರು ಯಾರಾಗಬೇಕು?
ಅವರು ಇಂದು(ಮಾ.೨೭) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಸಾರ್ವಜನಿಕ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಕಾಸರಕೋಡು ಬಂದರು ನಿರ್ಮಾಣ ಕಾಮಗಾರಿಗೆ ಸ್ಥಳೀಯ ಜನತೆ ತಮ್ಮ ಸಂಪೂರ್ಣ ಸಹಕಾರ ನೀಡಬೇಕು. ಯೋಜನೆ ಕುರಿತ ಸಾರ್ವಜನಿಕರ ಅಹವಾಲು ಮತ್ತು ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು. ಇದೇ ತಿಂಗಳಲ್ಲಿ ಯೋಜನೆಯ ಕಾಮಗಾರಿ ಕುರಿತಂತೆ ಸರ್ವೇ ಕಾರ್ಯ ಆರಂಭಿಸಲಾಗುವುದು. ಈ ಬಗ್ಗೆ ಸಾರ್ವಜನಿಕರಿಗೆ ದಿನಪತ್ರಿಕೆಗಳ ಮೂಲಕ ಮಾಹಿತಿ ನೀಡಲಾಗುವುದು ಎಂದರು.
ಇದನ್ನೂ ಓದಿ : ಡಿ ಕೆ ಶಿವಕುಮಾರ್, ನಿಂಬಾಳ್ಕರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಸಾರ್ವಜನಿಕರಿಗೆ ಗರಿಷ್ಠ ಪ್ರಮಾಣದ ಪರಿಹಾರ ಮೊತ್ತ, ಪರ್ಯಾಯ ಜಮೀನು ಅಲ್ಲದೇ ಕುಟುಂಬದ ಸದಸ್ಯರಿಗೆ ಉದ್ಯೋಗ ಒದಗಿಸಲಾಗುವುದು. ಗ್ರಾಮಸ್ಥರ ಎಲ್ಲಾ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಹಾಗೂ ನ್ಯಾಯಯುತವಾಗಿ ಈಡೇರಿಸಲಾಗುವುದು. ಅಲ್ಲದೇ ಈ ಹಿಂದೆ ಸ್ಥಳೀಯರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಕೂಡ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದೆ ಎಂದರು.
ಬ್ರೇಕಿಂಗ್ ನ್ಯೂಸ್ ನೋಡಿ : ಕುಮಟಾದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
ಈಗಾಗಲೇ ಯೋಜನೆಯು ಸಾಕಷ್ಟು ವಿಳಂಬವಾಗಿದೆ. ಈ ಯೋಜನೆಯ ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನಾ, ಬಂದರು ಇಲಾಖೆಯ ಕ್ಯಾ.ಸ್ವಾಮಿ ಹಾಗೂ ಕಾಸರಕೋಡು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.