ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾಗಿರುವ ಭಟ್ಕಳ ತಾಲೂಕಿನ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದು(ಜುಲೈ ೭) ಕುಟುಂಬ ಸಹಿತ ದೇವಸ್ಥಾನಕ್ಕೆ ಭೇಟಿ ನೀಡಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶ್ರೀ ದೇವರಿಗೆ ವಿಶೇಷ ಉದಯಸ್ತಮಾನ ಸೇವಾ ಪೂಜೆ ಸಲ್ಲಿಸಿ ಶ್ರೀ ದೇವರ ಆಶೀರ್ವಾದ ಪಡೆದರು.
ನಂತರ ಪರಮಪೂಜ್ಯ ಶ್ರೀ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೆಯರ ಸ್ವಾಮೀಜಿಯವರ ಪಾದರಕ್ಕೆ ನಮಸ್ಕರಿಸಿ ಶ್ರೀಗಳ ಆಶೀರ್ವಾದ ಪಡೆದರು. ಸುವರ್ಣ ಮಹೋತ್ಸವದ ವಿಶೇಷ ದೇವಸ್ಥಾನದಲ್ಲಿ ಕಲ್ಪಿಸಲಾದ ಭೋಜನ ಪ್ರಸಾದವನ್ನು ಸಚಿವರು ಕುಟುಂಬ ಸಹಿತ ಸ್ವೀಕರಿಸಿದರು.
ಇದನ್ನೂ ಓದಿ : ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಧರ್ಮದರ್ಶಿಗಳಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ಮಾರಿಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ, ಆಡಳಿತ ಮಂಡಳಿಯ ಸದಸ್ಯರು, ಊರಿನ ಪ್ರಮುಖರಿದ್ದರು.