ಶಂಕರಘಟ್ಟ : ಇಲ್ಲಿನ ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ.‌ ಎಸ್. ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ : ಸತತ ನಾಲ್ಕನೇ ಬಾರಿ ಪರೀಕ್ಷೆ ಬರೆಯುವವನಿಗೆ ಶುಭ ಕೋರಿ ಪ್ಲೆಕ್ಸ್

ಪ್ರೊ.‌ ಎಸ್. ವೆಂಕಟೇಶ್ ಅವರ ಡೀನ್ ಅವಧಿ ಮಾರ್ಚ್ ೧ಕ್ಕೆ ಮುಕ್ತಾಯಗೊಂಡ‌ ಹಿನ್ನೆಲೆಯಲ್ಲಿ ನಂತರದ ಹಿರಿಯ ಡೀನ್ ಪ್ರೊ. ಎಸ್. ವಿ. ಕೃಷ್ಣಮೂರ್ತಿ ಅವರನ್ನು ಪ್ರಭಾರ ಕುಲಪತಿಯನ್ನಾಗಿ‌ ನೇಮಕಗೊಳಿಸಿ‌ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಪರಿಸರ ವಿಜ್ಞಾನ ಪ್ರಾಧ್ಯಾಪಕ

ಮೂಲತಃ ಪರಿಸರ ವಿಜ್ಞಾನ ಪ್ರಾಧ್ಯಾಪಕರಾದ ಪ್ರೊ.‌ ಕೃಷ್ಣಮೂರ್ತಿ ಅವರ ಡೀನ್ ಅವಧಿ ಮಾರ್ಚ್, 2025ರವರೆಗೆ ಇದ್ದು, ಪೂರ್ಣಾವಧಿ ಕುಲಪತಿ ನೇಮಕಗೊಳ್ಳುವವರೆಗೆ ಕಾರ್ಯನಿರ್ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.‌ ಬಂಗಾರಪ್ಪ, ಡಾ. ಕೆ.‌ ಆರ್. ಮಂಜುನಾಥ್ ಸೇರಿದಂತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.

ಈ ವಿಡಿಯೋ ನೋಡಿ : ಭದ್ರಾವತಿಯಲ್ಲಿ ಚಿರತೆ ಸೆರೆ  https://fb.watch/qyCs71oKPR/?mibextid=Nif5oz