ಭಟ್ಕಳ: ತಾಲೂಕಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಶಿರಾಲಿಯ ಕೋಟೆಬಾಗಿಲು ಸೈಂಟ್ ಥಾಮಸ್ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಜಗದೀಶ ನಾಯ್ಕ ಹಾಗೂ ಅರಣ್ಯ ಇಲಾಖೆಯ ಸಹಾಯದಿಂದ ನೂರಾರು ಗಿಡಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಹಂಚಲಾಯಿತು.

ಇದನ್ನೂ ಓದಿ : ಜೂನ್‌ ೬ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸ್ಯಾಮ್ಯುಯೆಲ್ ವರ್ಗಿಸ್ ಮಾತನಾಡಿ, ನಾವು ನಮ್ಮ ಪರಿಸರವನ್ನು ಕಾಪಾಡಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಏನಾದರೊಂದು ಕೊಡುಗೆ ನೀಡಲು ಸಾಧ್ಯ. ಇಂದು ನಾವು ಪರಿಸರ ಅಸಮತೋಲನದಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಅವುಗಳನ್ನು ಸರಿಪಡಿಸುವ ಕಾರ್ಯ ಯುವ ಜನತೆಯಿಂದ ಆಗಬೇಕಾಗಿದೆ ಎಂದರು.

ಇದನ್ನೂ ಓದಿ : ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಮಂಕಾಳ ವೈದ್ಯ

ಈ ಸಂದರ್ಭದಲ್ಲಿ ಕೋಟೆಬಾಗಿಲು ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯ ಸಿಜೊ ಸ್ಯಾಮ್ಯುಯೆಲ್, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.