ಭಟ್ಕಳ: ಬೆಂಗಳೂರಿನ ಕ್ಯೂ ಸ್ಪೈಡರ್ಸ್ ಕಂಪೆನಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ೧೫ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ನಗರದ ಅಂಜುಮಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮೆನೇಜ್‌ಮೆಂಟ್ ಕಾಲೇಜಿನಲ್ಲಿ ಕ್ಯೂ ಸ್ಪೈಡರ್ಸ್ ಕಂಪೆನಿಯ ವತಿಯಿಂದ ಕ್ಯಾಂಪಸ್ ಸಂದರ್ಶನ ನಡೆಯಿತು. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ೧೨ ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, ಇಬ್ಬರು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದವರು ಮತ್ತು ಓರ್ವ ವಿದ್ಯಾರ್ಥಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದವರಾಗಿದ್ದಾರೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಯೂ ಸ್ಪೈಡರ್ಸ್ ಕಂಪನಿ ವತಿಯಿಂದ ಇತ್ತೀಚಿನ ತಂತ್ರಜ್ಞಾನಗಳಲ್ಲಿ ಉಚಿತ ತರಬೇತಿಯನ್ನು ನೀಡಿ ತರಬೇತಿಯ ನಂತರ ಉದ್ಯೋಗಾವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಫಜಲುರ್ ರಹಮಾನ್, ರೆಜಿಸ್ಟ್ರಾರ್ ಪ್ರೊ. ಜಾಹಿದ್ ಖರೂರಿ, ಪ್ಲೇಸ್ ಮೆಂಟ್ ಅಧಿಕಾರಿ ಪ್ರೊ. ಶ್ರೀಶೈಲ್ ಭಟ್ ಮುಂತಾದವರು ಅಭಿನಂದಿಸಿದ್ದಾರೆ.