ಭಟ್ಕಳ: ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು. ವಿದ್ಯಾರ್ಥಿಗಳು ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿ ಖುಷಿಪಟ್ಟರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶಾಲೆಗಳಲ್ಲಿ ಸಾಮಾನ್ಯವಾಗಿ ಆಟ – ಪಾಠದ ಜತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ. ಆದರೆ, ಭಟ್ಕಳ ತಾಲೂಕಿನ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ. ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತಾ ತಲ್ಲೀನರಾಗುತ್ತಿದ್ದ, ತಾಲೂಕಿನ ವಿದ್ಯಾಭಾರತಿ ಇಂಗ್ಲಿಷ್ ಮೀಡಿಯಂ ಶಾಲಾ ಮಕ್ಕಳಿಗೆ ಗದ್ದೆ ಎಂದರೆ ಏನು? ಬೇಸಾಯ ಎಂದರೆ ಹೇಗೆ? ನಾಟಿ ಹೇಗೆ ಮಾಡಬೇಕು ಎಂದೆಲ್ಲ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಮಕ್ಕಳು ಮಳೆಯನ್ನು ಲೆಕ್ಕಿಸದೆ ಉತ್ಸುಕತೆಯಲ್ಲಿ ಪಾಲ್ಗೊಂಡು ಗದ್ದೆಯಲ್ಲಿ ನಾಟಿ ಮಾಡುವುದು ಎಲ್ಲರ ಗಮನ ಸೆಳೆಯಿತು.
ಇದನ್ನೂ ಓದಿ : ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡುತ್ತೇನೆಂದ ಸಚಿವ ಮಂಕಾಳ ವೈದ್ಯ
ಭಟ್ಕಳ ಎಜುಕೇಶನ್ ಟ್ರಸ್ಟ್‌ನ ವಿದ್ಯಾಭಾರತಿ ಇಂಗ್ಲೀಷ್ ಸ್ಕೂಲ್ ಹಾಗೂ ಕ್ರಿಯಾಶೀಲ ಗೆಳೆಯರ ಬಳಗ ವತಿಯಿಂದ ಇಲ್ಲಿನ ವಿ.ಟಿ. ರಸ್ತೆಯಲ್ಲಿನ ಜಂಬೂರಮಠದಲ್ಲಿರುವ ಗದ್ದೆಯಲ್ಲಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕೃಷಿ ಅಧಿಕಾರಿ ಮೇಘನ ಖಾರ್ವಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ರಿಯಾಶೀಲ ಗೆಳೆಯ ಬಳಗದ ಅಧ್ಯಕ್ಷರಾದ ದೀಪಕ ನಾಯ್ಕ, ರಮೇಶ ಖಾರ್ವಿ, ಶ್ರೀಕಾಂತ ನಾಯ್ಕ , ಮಣಿ ನಾಯ್ಕ ಪಾಂಡುರಂಗ ನಾಯ್ಕ ಮತ್ತಿತರರು ಇದ್ದರು.
ಇದನ್ನೂ ಓದಿ : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ, ಸವಾರರಿಬ್ಬರಿಗೆ ಗಾಯ
ಈ ಬಗ್ಗೆ ಮಾತನಾಡಿದ ವಿದ್ಯಾಭಾರತಿ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿ ರೂಪಾ ಖಾರ್ವಿ ಮಾತನಾಡಿ, ವಿದ್ಯಾಭಾರತಿ ಸ್ಕೂಲ್ ಯಾವಾಗಲೂ ವಿಶೇಷ ಕಾರ್ಯಕ್ರಮಗಳಿಂದ ಗುರುತಿಸಿಕೊಂಡು ಬಂದಿದೆ. ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ನೈತಿಕ ಮೌಲ್ಯವನ್ನು ಹೇಳಿಕೊಡುತ್ತಿದ್ದೇವೆ. ಇಂದಿನ ಮಕ್ಕಳಿಗೆ ಗದ್ದೆ ಎಂದರೆ ಏನು ಎನ್ನುವುದು ತಿಳಿದಿಲ್ಲ. ಹೊಟೇಲುಗಳಿಗೆ ಹೋದ ವೇಳೆ ಅರ್ಧ ತಿಂದು ಅರ್ಧ ಅಲ್ಲೇ ಬಿಟ್ಟು ಬರುತ್ತಿದ್ದಾರೆ. ಅವರಿಗೆ ಅನ್ನದ ಮೌಲ್ಯ ತಿಳಿದಿಲ್ಲ. ನಾವು ಊಟ ಮಾಡುವ ಅಕ್ಕಿಯನ್ನು ಹೇಗೆ ಕಷ್ಟಪಟ್ಟು ಮಾಡುತ್ತಾರೆ ಎನ್ನುವ ಪರಿಜ್ಞಾನವಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಪಾಠದಲ್ಲಿ ಕೃಷಿ ಚಟುವಟಿಕೆಯ ಕುರಿತು ಮೌಖಿಕವಾಗಿ ಹೇಳುವುದಕ್ಕಿಂತ ಪ್ರಾಯೋಗಿಕವಾಗಿ ತೋರ್ಪಡಿಸಿದರೆ ವಿದ್ಯಾರ್ಥಿಗಳು ವಾಸ್ತವತೆ ಅರಿಯಲು ಸಾಧ್ಯವಾಗುತ್ತದೆ ಎಂದರು.
ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ಅಡಚಣೆ
ಈ ವೇಳೆ ಮಕ್ಕಳು ವಿಶೇಷ ಬಟ್ಟೆ ತೊಟ್ಟು ಗದ್ದೆಗಿಳಿದು ನಾಟಿ ಮಾಡುವುದರ ಮೂಲಕ ಎಲ್ಲರ ಗಮನ ಸೆಳೆದರು. ಇದರ ಜೊತೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಕ್ರಿಯಾಶೀಲ ಗೆಳೆಯ ಬಳಗದವರು ಕೂಡ ಗದ್ದೆ ನಾಟಿ ಮಾಡಿದರು.
ಇದನ್ನೂ ಓದಿ : ಭಟ್ಕಳ ತಾಲೂಕಿನಾದ್ಯಂತ ಎರಡ್ಮೂರು ದಿನಗಳಿಂದ ವರುಣಾರ್ಭಟ