ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ಡಕುಸಿತ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿವೆ. ಐದಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ದಂಪತಿಗೆ ತಳಹಂತದ ನಾವೀನ್ಯತಾ ಪುರಸ್ಕಾರ

ಐವರು ಸದಸ್ಯರ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದೆ. ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ : ಸ್ನೇಹಾ ವಿಶೇಷ ಮಕ್ಕಳ ಶಾಲೆಗೆ ಕಾಶೀಮಠ ವ್ಯವಸ್ಥಾಪಕ ಸಮಿತಿ ಭೇಟಿ

ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

ಇದನ್ನೂ ಓದಿ : ಮಗಳು ನೇಣಿಗೆ ಶರಣಾಗಿದ್ದನ್ನು ನೋಡಿ ತಾಯಿಯೂ ಆತ್ಮಹತ್ಯೆ

ನದಿಯಲ್ಲಿ ತೇಲಿದ ಟ್ಯಾಂಕರ್ :
ಅಂಕೋಲಾದ ಶಿರೂರು ಬಳಿ ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದ ರಭಸಕ್ಕೆ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ನದಿ ನೀರಿನ ಸೆಳೆತಕ್ಕೆ ಟ್ಯಾಂಕರ್ ತೇಲಿಕೊಂಡು ಹೋಗಿದೆ.

ಇದನ್ನೂ ಓದಿ : ಮಳೆ ಆರ್ಭಟ ಮುಂದುವರಿಕೆ, ಹಲವೆಡೆ ಹಾನಿ