ಶಿವಮೊಗ್ಗ : ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿ ಸಾಗರ ಮೂಲದ ಒಂದೇ ಕುಟುಂಬದ ಐವರು ಪ್ರಯಾಣಿಸುತಿದ್ದರು.

ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನ ಚಲಾಯಿಸುತಿದ್ದ ಎಲೋನ್ ಲೋಫಿಸ್(52) ರವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಎಲೋನ್ ಲೋಫಿಸ್ (48), ದೀಪ್ತಿ ಲೋಫಿಸ್ (43), ಮಾರ್ಗರೇಟ್ ಲೋಫಿಸ್(43) ರವರಿಗೂ ತೀವ್ರವಾದ ಪೆಟ್ಟಾಗಿದ್ದು ನಾಲ್ವರನ್ನೂ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕ ರತೀಕ್(16) ಎಂಬಾತನಿಗೆ ಸಣ್ಣಪುಟ್ಟ ಗಾಯಾಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.