ಹೊನ್ನಾವರ: ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್ ನಲ್ಲಿರುವ ಕಾಮಾಕ್ಷಿ ಜ್ಯೂವೆಲರ್ ಚಿನ್ನದ ಅಂಗಡಿ ಶಟರ್ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್  ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಗುಳದಕೇರಿ ಅಣ್ಣಪ್ಪ ಪ್ರಭಾಕರ ಶೇಟ್ ಎಂಬುವವರಿಗೆ ಸೇರಿದ ಚಿನ್ನದ ಅಂಗಡಿ ಕಳ್ಳತನವಾಗಿದೆ. ಬಲವಾದ ವಸ್ತುವಿನಿಂದ ಶಟರ್ ಎತ್ತಿ ಅಂಗಡಿಯ ಒಳನುಗ್ಗಿದ ಕಳ್ಳರು ಕಳ್ಳತನ ನಡೆಸಿದ್ದಾರೆ. ೨೯೬ ಗ್ರಾಂ ತೂಕದ ಅಂದಾಜು ೧೪ ಲಕ್ಷ ೫೫ ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ೨೨.೫ ಕೆ.ಜಿ. ತೂಕದ ೧೧ ಲಕ್ಷ ೧೦ ಸಾವಿರ ರೂ. ಮೌಲ್ಯದ ಬೆಳ್ಳಿಯ ಆಭರಣ ಮತ್ತು ವಸ್ತುಗಳನ್ನು ಕದ್ದೊಯ್ದಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ಬೆಸ್ಟ್ ಡಾನ್ಸರ್ ಸ್ಪರ್ಧೆಗೆ ಋತಿಕಾ ಮಹಾಲೆ ಆಯ್ಕೆ

ಈ ಕುರಿತು ಅಣ್ಣಪ್ಪ ಪ್ರಭಾಕರ ಶೇಟ್ ಮಂಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ