ಭಟ್ಕಳ: ತಾಲೂಕಿನ ಜಾಲಿ ಸರಕಾರಿ ಪ್ರೌಢಶಾಲೆ ೩೨ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಫಲಿತಾಂಶ 100% ಆಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

೩೨ ವಿದ್ಯಾರ್ಥಿಗಳಲ್ಲಿ ೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೧೮ ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು ೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸೇವಂತಿ ಈರಯ್ಯ ಗೊಂಡ (೫೯೫ ಅಂಕ/೯೫%) ಶಾಲೆಗೆ ಪ್ರಥಮ, ಶಿವಾನಂದ ಲೋಕೇಶ ಮೊಗೇರ (೫೭೫/ ೯೨%)ದ್ವಿತೀಯ ಮತ್ತು ಸಹನಾ ರಾಜು ನಾಯ್ಕ (೫೬೭/೯೦.೭೨ % ) ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆ ೧೦೦% ಫಲಿತಾಂಶ

ಜಾಲಿ ಸರಕಾರಿ ಪ್ರೌಢಶಾಲೆ ಪ್ರಾರಂಭವಾದಾಗಿನಿಂದ ಇದುವರೆಗಿನ ೧೪ ಎಸ್ ಎಸ್ ಎಲ್ ಸಿ ಬ್ಯಾಚ್ ಗಳಲ್ಲಿ ೯ ಸಲ 100ಕ್ಕೆ 100 ರಷ್ಟು ಸಾಧನೆ ಮಾಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಊರ ನಾಗರಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಅಭಿನಂದನೆ ತಿಳಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.