ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಇವರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ : ಎನ್ಐಎ ತಂಡ ಭಟ್ಕಳಕ್ಕೆ, ಇಕ್ಬಾಲ್ ಭಟ್ಕಳ್ ಮನೆಗೆ ಭೇಟಿ

ಡಿ ಕೆ ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಕರ್ನಾಟಕ ಸರಕಾರದ ಚಿಹ್ನೆ ಮತ್ತು ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್ ಅವರ ಪರ ಚುನಾವಣಾ ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಅವರು ತಮ್ಮ ಪತ್ನಿ, ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ. ತಮ್ಮ ಕಚೇರಿಯನ್ನು ಬಳಸಿಕೊಂಡು ಅವರು ಮತಯಾಚನೆ ಮಾಡುತ್ತಿದ್ದಾರೆ. ಹೀಗಾಗಿ ತಕ್ಷಣ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಬೇಕು. ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವರಿಗೆ ಅವಕಾಶ ಕೊಡಿ ಎಂದು ಬಿಜೆಪಿ ನಾಯಕರು ವಿನಂತಿಸಿದ್ದಾರೆ.

ಬ್ರೇಕಿಂಗ್ ನ್ಯೂಸ್ : ಕುಮಟಾದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ