ಭಟ್ಕಳ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಉತ್ತರಕನ್ನಡ, ಭಟ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಹಯೋಗದೊಂದಿಗೆ ಇಲ್ಲಿನ ಜಾಲಿ ಕೋಸ್ಟಲ್ ಐಸ್ ಪ್ಲಾಂಟ್ ಸಮೀಪ ನೂತನ ‘ನಮ್ಮ ಕ್ಲಿನಿಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್  ಫಾಲೋವ್ ಮಾಡಲು ಇಲ್ಲಿ ಒತ್ತಿ.

ನಂತರ ಮಾತನಾಡಿದ ಅವರು, ಸರಕಾರ ಆರೋಗ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಿದೆ. ಎಲ್ಲ ಔಷಧಿಗಳು ಸರಕಾರಿ ಆಸ್ಪತ್ರೆ, ಕ್ಲಿನಿಕ್‌ಗಳಲ್ಲಿ ಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ವೈದ್ಯರ ಕೊರತೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಮೆಡಿಕಲ್‌ ಕಾಲೇಜುಗಳಿಂದಲೇ ವೈದ್ಯರಿಗೆ ಆಹ್ವಾನವನ್ನು ನೀಡಲಾಗುತ್ತಿದೆ. ವೈದ್ಯರು ತಮಗೆ ಇಷ್ಟ ಬಂದ ತಾಲೂಕುಗಳಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗುವಂತೆ ಕೌನ್ಸಲಿಂಗ್ ಪದ್ಧತಿಯನ್ನು ರೂಪಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಾಲಿಯಲ್ಲಿ ‘ನಮ್ಮ ಕ್ಲಿನಿಕ್’ ಅನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ರಸ್ತೆ ದುರಸ್ತಿಗೆ ಮುಂದಾದ ಸಾರ್ವಜನಿಕರು !

ಭಟ್ಕಳ ಸಹಾಯಕ ಆಯುಕ್ತೆ ಡಾ.ನಯನಾ ಮಾತನಾಡಿದರು. ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಸೀಲ್ದಾರ ನಾಗರಾಜ, ಜಾಲಿ ಪಟ್ಟಣ ಪಂಚಾಯತ ಸದಸ್ಯರಾದ ರಮೇಶ ಗೊಂಡ, ನಾಗರಾಜ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಸರಕಾರಿ ಆಸ್ಪತ್ರೆಯ ಸಿಬ್ಬಂದಿ ವೆಂಕಟೇಶ ನಾಯ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ : ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಜೋಗ ಜಲಪಾತ