ಕಾರವಾರ :ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಾಲ್ಕು ತಾಲೂಕುಗಳಲ್ಲಿ ಶಾಲಾ- ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಕರಾವಳಿ ಜಿಲ್ಲೆಯ ಐದು ತಾಲೂಕುಗಳ ಪೈಕಿ ನಾಳೆ ನಾಲ್ಕು ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ. ಅಂಕೋಲಾ ತಾಲೂಕನ್ನು ಈ ಆದೇಶದಿಂದ ಹೊರಗಿಡಲಾಗಿದೆ.
ಇದನ್ನೂ ಓದಿ : ಲಕ್ಷ್ಮಿಪ್ರಿಯಾ ಕೆ. ಉತ್ತರ ಕನ್ನಡದ ನೂತನ ಜಿಲ್ಲಾಧಿಕಾರಿ
ಭಾರತೀಯ ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ೪ರ ಮಧ್ಯಾಹ್ನ ೧ ಗಂಟೆಯಿಂದ ಜುಲೈ ೭ ರ ಬೆಳಿಗ್ಗೆ ೮.೩೦ ರವರೆಗೆ ಭಾರಿ ಮಳೆಯಾಗುವ ಸೂಚನೆ (ಆರೇಂಜ್ ಅಲರ್ಟ್)ನ್ನು ನೀಡಿದೆ. ಅಲ್ಲದೆ ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿವೆ. ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಹಶೀಲ್ದಾರರು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ರ ಕಲಂ ೩೪(ಎಮ್) ರಡಿ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲೇ ಶಿಕಾರಿಪುರದ ವ್ಯಕ್ತಿ ಸಾವು
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ ೬ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಮಾಡಿದ್ದಾರೆ. ಜುಲೈ ೫ರಂದು ಕೂಡ ಭಟ್ಕಳ, ಹೊನ್ಮಾವರ ಮತ್ತು ಕುಮಟಾ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.