ಗದಗ : ನೀರು ಕುಡಿಯಲು ಹೋದ ಮಹಿಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ಕೃಷಿ ಹೊಂಡದಲ್ಲಿ ಬಿದ್ದು ಯುವಕರಿಬ್ಬರು ದುರ್ಮರಣ
ಗೌರಮ್ಮ ಕರಿಗಾರ (48) ಮೃತಪಟ್ಟ ದುರ್ದೈವಿ. ಜಮೀನಿಗೆ ಹೋಗಿದ್ದ ಗೌರಮ್ಮ ಬಿಸಿಲಿನ ತಾಪಕ್ಕೆ ಬಾಯಾರಿಕೆ ಆಗಿದೆ ಎಂದು ನೀರು ಕುಡಿಯಲು ಹೋಗಿದ್ದಾರೆ. ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ನೀರು ಕುಡಿಯಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಕೃಷಿ ಹೊಂಡದಿಂದ ಹೊರಬರಲು ಆಗದೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃಷಿ ಹೊಂಡದಲ್ಲಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಲಕ್ಷ್ಮೇಶ್ವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.