ಭಟ್ಕಳ : “ಮಾಧ್ಯಮವು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರಸ್ತಂಭವಾಗಿದೆ. ಇದು ಜನರಿಗೆ ಹೊಸ ವಿಷಯಗಳನ್ನು, ಮಾಹಿತಿಯನ್ನು ತಿಳಿಸುವ ಮತ್ತು ಜನರ ಆಶೋತ್ತರಗಳನ್ನು ಈಡೇರಿಸುವ ಉತ್ತಮ ವೇದಿಕೆಯಾಗಿದೆ” ಎಂದು ಇಡಗುಂಜಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೊಸಬಯ್ಯ ಪಟಗಾರ ಹೇಳಿದರು. ನಗರದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದ ಬಿಎ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲ್ಪಟ್ಟ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಸ್ತುಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ ಮಾತನಾಡಿ, ಪತ್ರಿಕೋದ್ಯಮದ ಸಮಗ್ರ ಚಿತ್ರಣವನ್ನು ಒಂದೇ ಸೂರಿನಡಿಯಲ್ಲಿ ಪ್ರದರ್ಶಿಸಿರುವುದು ಗಮನಾರ್ಹವಾದದು ಎಂದು ಹೇಳಿದರು.
ಇದನ್ನೂ ಓದಿ : ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ ಡಾ.ಅರುಣಕುಮಾರಗೆ ಹೃದಯಸ್ಪರ್ಶಿ ಸ್ವಾಗತ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ರಮೇಶ ಖಾರ್ವಿ ಮಾತನಾಡಿ, ವಸ್ತು ಪ್ರದರ್ಶನದಲ್ಲಿ ಸಕ್ರೀಯವಾಗಿ ಪಾಲ್ಗೊಂಡ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು.
ಇದನ್ನೂ ಓದಿ : ಭಟ್ಕಳ ಮಾರಿಜಾತ್ರೆ ಜುಲೈ ೩೧ರಿಂದ ಆರಂಭ
ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳಾದ ಕಪಿಲ್ ಭಟ್ ಹಾಗೂ ಲಿಧಿಯಾ ನಿರೂಪಿಸಿದರು. ಇಶಿತಾ ನಾಯ್ಕ್ ವಂದಿಸಿದರು. ಈ ಸಂಧರ್ಭದಲ್ಲಿ ವಿವಿಧ ವಿಭಾಗದ ಉಪ ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಭಟ್ಕಳ ತಾಲೂಕಿನ ಪತ್ರಕರ್ತರು ಉಪಸ್ಥಿತರಿದ್ದರು.