ಕುಮಟಾ: ಮೂರೂರು-ಕಲ್ಲಬ್ಬೆಯ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ಪಡೆದುಕೊಳ್ಳುವ ಮೂಲಕ ಸತತ ೧೪ ವರ್ಷಗಳಿಂದ ನೂರಕ್ಕೆ ನೂರು ಸಾಧನೆ ಮಾಡಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷೆಗೆ ಕುಳಿತ ೫೭ ವಿದ್ಯಾರ್ಥಿಗಳಲ್ಲಿ ೧೮ ವಿದ್ಯಾರ್ಥಿಗಳು ಶೇ.೯೦ ಕ್ಕಿಂತ ಹೆಚ್ಚು ಅಂಕಗಳಿಸಿದ್ದಾರೆ. ೧೫ ವಿದ್ಯಾರ್ಥಿಗಳು ಶೇ.೮೦ ಕ್ಕಿಂತ ಹೆಚ್ಚು ಅಂಕಗಳಿಸಿದ್ದಾರೆ. ವಿಶಾಲ ವಿ. ಹೆಗಡೆ ೬೨೫ಕ್ಕೆ ೬೦೬ ಅಂಕ ಗಳಿಸಿ ಶಾಲೆಗೆ ಪ್ರಥಮ, ಆದರ್ಶ ವಿ. ಹೆಗಡೆ ೬೨೫ಕ್ಕೆ ೬೦೫ ಅಂಕದೊಂದಿಗೆ ದ್ವಿತೀಯ ಹಾಗೂ ಅಭಿಜಾತ ವಿ. ಭಟ್ಟ ೬೨೫ಕ್ಕೆ ೬೦೩ ಅಂಕ ಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ.

ಇದನ್ನೂ ಓದಿ : ವಿಶ್ವದರ್ಶನ ಪ್ರೌಢಶಾಲೆಗಳ ಉತ್ತಮ ಸಾಧನೆ; ಹರಿಪ್ರಕಾಶ ಕೋಣೆಮನೆ ಸಂತಸ