ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ಇದನ್ನೂ ಓದಿ : ಎಂಪ್ಲೋಯಿಸ್ ಪ್ರೀಮಿಯರ್ ಲೀಗ್ ಸೀಸನ್ 3- ಕುರುಕ್ಷೇತ್ರ ಫೈಟರ್ಸ್ ಚಾಂಪಿಯನ್
ಸೋಮವಾರ ನಗರದ ನೌಕರರ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, 27ನೇ ತಾರೀಖು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ 2 ಲಕ್ಷ ನೌಕರರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ : ದೈಹಿಕ ಶಿಕ್ಷಣ ಶೈಕ್ಷಣಿಕ ಕಾರ್ಯಾಗಾರ ಸಂಪನ್ನ
ಕಾರ್ಯಕ್ರಮದಲ್ಲಿ ನಮ್ಮ ಮೂರು ಬೇಡಿಕೆಯನ್ನು ಮುಂದಿಡುತ್ತೇವೆ. ಹಳೇ ಪಿಂಚಣಿ ಯೋಜನೆ ಜಾರಿಗೆ ತರಬೇಕು. 7ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಬೇಕು. ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡಬೇಕು. ಬೇಡಿಕೆ ಈಡೇರಿಕೆಗಾಗಿ ನಮ್ಮ ಸಮ್ಮೇಳನ ಮಾಡುತ್ತಿದ್ದೇವೆ. ಸಮ್ಮೇಳನದಲ್ಲಿ ನಮ್ಮ ಬೇಡಿಕೆ ಬಗ್ಗೆ ಸಿಎಂ ಭರವಸೆ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.
ಈ ವಿಡಿಯೋ ನೋಡಿ : ಕಿತ್ರೆ ದೇವಿಮನೆಗೆ ರಾಘವೇಶ್ವರ ಭಾರತೀ ಸ್ವಾಮಿಗಳ ಆಗಮನ https://fb.watch/qiS8Zeedxn/?mibextid=Nif5oz
ಸಮ್ಮೇಳನದಲ್ಲಿ ಸಂಘಟನೆ ಶಕ್ತಿ ತೋರಿಸಲಾಗುತ್ತದೆ. ಸಮ್ಮೇಳನಕ್ಕೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಹಳೇ ಪಿಂಚಣಿ ಜಾರಿಗೆ ತರುತ್ತೇವೆ ಅಂದಿದ್ದಾರೆ. ಸರ್ಕಾರ ಸಮಯ ಕೇಳಿದೆ ಹಾಗಾಗಿ ಸರ್ಕಾರದ ಆದೇಶಕ್ಕೆ ಕಾಯುತ್ತಿದ್ದೇವೆ. ಸಮಾವೇಶದಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.