ಅಥಣಿ : ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿಯ ಪ್ರಿಯಾ ಎಕ್ಸ್ ಪೋರ್ಟ್ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಸ್ಫೋಟ ಗೊಂಡಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಘಟನೆಯಲ್ಲಿ ಶೋಭಾ ತೇಲಿ ಮೃತಪಟ್ಟಿದ್ದು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆಕ್ಕೆಜೋಳ ಪಾಲಿಶ್ ಮಾಡಿ ಎಕ್ಸ್ ಪೋರ್ಟ್ ಮಾಡುವ ಕಾರ್ಖಾನೆ ಇದಾಗಿದೆ. ಅತಿ ಒತ್ತಡದಿಂದ ಬಾಯ್ಲರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮೇ ೨೧ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ