ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಕೆಯ
ಕಟಗೇರಿಯಲ್ಲಿ ನಡೆದಿದೆ.
ಇದನ್ನೂ ಓದಿ : ವಿಶ್ವೇಶ್ವರ ಹೆಗಡೆ ಕಾಗೇರಿ ಭಟ್ಕಳದಲ್ಲಿ ಬಿರುಸಿನ ಪ್ರಚಾರ
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿ ದೀಕ್ಷಾ ನಾರಾಯಣ ನಾಯ್ಕ (22). ಇವರು ಗುರುವಾರ ಎಂದಿನಂತೆ ಬೆಳಿಗ್ಗೆ ಕಾಲೇಜಿಗೆ ಹೋಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾವಿಯ ನೀರಿನಲ್ಲಿ ಮುಳುಗಿ ಇವರು ಮೃತಪಟ್ಟಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.