ಮುಂಡಗೋಡ : ಬೈಕಗಳ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಮೃತ ಅರವಿಂದ

ಪಟ್ಟಣದ ಹಳೂರಿನ ನಿವಾಸಿ ಅರವಿಂದ ಬೆಲ್ದಾರ (24) ಮೃತ ಯುವಕ. ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಎರಡು ಬೈಕಗಳು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರವಾಗಿ ಗಾಯಗೊಂಡವರು ತಾಲೂಕಿನ ಕೊಪ್ಪ ಗ್ರಾಮದವರು. ತಕ್ಷಣವೇ ಗಾಯಾಳುಗಳಿಗೆ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಮುಂಡಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಐಓಬಿ ಚಾಂಪಿಯನ್