ಕಾರವಾರ: ಭಟ್ಕಳ : ಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಮಾರ್ಚ್ 13ರಂದು ಭಟ್ಕಳಕ್ಕೆ ಬರ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಭಟ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಲಿದ್ದಾರೆ.
ಇದನ್ನೂ ಓದಿ : ಮಹಾಶಿವರಾತ್ರಿ ಆಚರಣೆಗೆ ಜಿಲ್ಲಾಡಳಿತ ಸಜ್ಜು
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ, ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 & 2 ರಲ್ಲಿ ಭರ್ತಿಮಾಡಿ ನೀಡಬಹುದಾಗಿದೆ. ಭಟ್ಕಳಕ್ಕೆ ಅಧಿಕಾರಿಗಳು ಬಂದಾಗ ಸರ್ಕಾರಿ ಅಧಿಕಾರಿ/ನೌಕರರು ಲಂಚಕ್ಕೆ ಬೇಡಿಕೆ, ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಗುಪ್ತ ಮಾಹಿತಿಯನ್ನು ನೀಡಬಹುದಾಗಿದೆ.
ಈ ವಿಡಿಯೋ ನೋಡಿ : ಖಾನಾಪುರದಲ್ಲಿ ಸಂಸದ ಹೆಗಡೆ ವಿರುದ್ಧ ರೈತರ ಆಕ್ರೋಶ https://fb.watch/qF1e-6y3UY/?mibextid=Nif5oz
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382- 295293/220198/ 222250/222022/229988 ಸಂಪರ್ಕಿಸುವಂತೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ತಿಳಿಸಿದ್ದಾರೆ.