ಭಟ್ಕಳ : ಬುಧವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯ ತನಕ ಭಟ್ಕಳ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯವಾಗಲಿದೆ. ಮುರುಡೇಶ್ವರದ ೧೧೦ ಕೆ ವಿ ಮಾರ್ಗದಲ್ಲಿ ಉಂಟಾದ ದೋಷವನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಂಜುನಾಥ ತಿಳಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮುರುಡೇಶ್ವರದ ೧೧೦ ಕೆವಿ ಮಾರ್ಗದಲ್ಲಿ ೫ ರಿಂದ ೬ ಕಡೆ ಇನ್ಸುಲೇಟರ್ ಫ್ಲಾಶ್ ಓವರ್ ಆಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ೧೧೦ ಕೆವಿ ಹೊನ್ನಾವರ ಮುರುಡೇಶ್ವರ ಮಾರ್ಗದಲ್ಲಿ ರಿಪೇರಿ ಕಾರ್ಯ ನಡೆಯಲಿದೆ. ಈ ವೇಳೆ ಭಟ್ಕಳ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಂಜುನಾಥ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ : ಸಮುದಾಯ ಬದುಕಿನ ಶಿಬಿರ ಯಶಸ್ವಿ