ಶಿರಸಿ : ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಿನ್ನೆಲೆ ದಾಸನಕೊಪ್ಪ ಮೂಲದ ಅಬ್ದುಲ್ ಶಕೂರ್(32) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವಿಡಿಯೋ ನೋಡಿ : ಕೆರೆಗೆ ಸೇರುತ್ತಿದೆ ರಕ್ತಮಿಶ್ರಿತ ನೀರು

ಇಂದು ಬೆಳಗ್ಗೆ ಐದು ಮಂದಿ ಅಧಿಕಾರಿಗಳಿರುವ ಎನ್ಐಎ ತಂಡ ಹಾಗೂ ರಾಜ್ಯದ ಇಂಟೆಲಿಜೆನ್ಸ್ ತಂಡದಿಂದ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್ ಮತ್ತು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪವಿದೆ. ಶಿವಮೊಗ್ಗದಲ್ಲೂ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಅಬ್ದುಲ್ ಶಕೂರ್ ಮೇಲಿದೆ.

ಇದನ್ನೂ ಓದಿ : ಸಾಕು ನಾಯಿಗೆ ವಿಧಿವತ್ತಾಗಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ದುಬೈ ನಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ ಶುಕ್ಕೂರ್ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಎಂದು ಹೇಳಲಾಹಿದೆ. ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.