ಹೊನ್ನಾವರ/ಕುಮಟಾ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಸಹ್ಯಾದ್ರಿ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿನ ಸಂಪರ್ಕ ಕಡಿತಗೊಂಡಿದೆ. ಹೊನ್ನಾವರ-ಸಾಗರ ಮತ್ತು ಕುಮಟಾ-ಶಿರಸಿ ಮಾರ್ಗಗಳು ಸಂಚಾರ ಸ್ಥಗಿತಗೊಂಡಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೬೯ರ ಭಾಸ್ಕೇರಿ ಹತ್ತಿರದ ವರ್ನಕೇರಿ ಹತ್ತಿರ ಗುಡ್ಡಕುಸಿತವಾಗಿದೆ. ಪರಿಣಾಮ ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತಗೊಂಡಿದೆ. ಕೆಲ ದಿನಗಳ ಹಿಂದೆ ಇದೇ ಸ್ಥಳದ ಹತ್ತಿರದಲ್ಲಿ ಗುಡ್ಡ ಕುಸಿತದಿಂದ ದೊಡ್ಡ ಬಂಡೆ ಉರುಳಿ ಬಿದ್ದಿತ್ತು. ಇಂದು ಗುಡ್ಡದ ಜೊತೆಗೆ ಮರ ಕೂಡ ಬಿದ್ದಿರುವುದು ವಾಹನ ಸಂಚಾರ ಸ್ಥಗಿತಗೊಳಿಸುವಂತಾಗಿದೆ.
ಇದನ್ನೂ ಓದಿ : ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ನದಿ ನೀರು
ಕುಮಟಾ, ಶಿರಸಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ 766-ಇ ನಲ್ಲಿನ ಕುಮಟಾ – ಶಿರಸಿ ಮಾರ್ಗದಲ್ಲಿ ಕತಗಾಲಿನ ಬಳಿ ಚಂಡಿಕಾ ಹೊಳೆ ತುಂಬಿ ಸಂಚಾರ ಬಂದ್ ಆಗಿದೆ. ಈ ಮಾರ್ಗದಲ್ಲಿ ಸಂಚರಿಸುತ್ತಿರುವ ಶಿವಕುಮಾರ್ ಬಸ್ ನೀರಿನ ಮದ್ಯೆ ಸಿಲುಕಿಕೊಂಡಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಬಚಾವ್ ಆಗಿದ್ದಾರೆ.
ಎರಡೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಕಡಿತದಿಂದ ಈ ಭಾಗದಿಂದ ಭಾರಿ ಮಳೆಗೆ ಮಲೆನಾಡಿನ ಸಂಪರ್ಕ ಕಡಿತವಾಗಿದೆ.
ಇದನ್ನೂ ಓದಿ : ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊನೆಯುಸಿರು
ಕುಮಟಾ ಭಾಗದ ಬರ್ಗಿಯಲ್ಲಿ ಮಳೆಯಿಂದಾಗಿ ಗುಡ್ಡದಿಂದ ಹರಿದುಬಂದ ನೀರು ರಾಷ್ಟ್ರೀಯ ಹೆದ್ದಾರಿ ೬೬ ಪಕ್ಕದಲ್ಲಿರುವ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಬರ್ಗಿ ಗ್ರಾಮದ ತಗ್ಗು ಪ್ರದೇಶದ ಮನೆಗಳು ಜಲಾವೃತಗೊಂಡಿವೆ.