ಹೊನ್ನಾವರ : ತಾಲೂಕಿನ ಮಂಕಿ ಬಳಿ ನಡೆದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನೂ ಓದಿ : ಪ್ರತಿಭಾನ್ವಿತ ಅನಂತನ ಚಿಕಿತ್ಸೆಗೆ ನೆರವಾಗಿ


ಮಂಕಿಯ ಗುಳದಕೇರಿ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕೆಎಸ್ಸಾರ್ಟಿಸಿ ಬಸ್ಸಿನಡಿ ಸಿಲುಕಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ.

ಈ ವಿಡಿಯೋ ನೋಡಿ : ಸರ್ಕಾರಿ ನೌಕರರ ವಾಲಿಬಾಲ್ ಪಂದ್ಯಾವಳಿ   https://fb.watch/qw5KGjTL19/?mibextid=Nif5oz

ಮುರ್ಡೇಶ್ವರದ ಮಾವಳ್ಳಿಯ ನಾಡವರಕೇರಿ ನಿವಾಸಿ ಸವಿತಾ ರಾಜು ಆಚಾರಿ(೪೦) ಮತ್ತು ಮಗಳು ಅಂಕಿತಾ(೧೭) ಮೃತ ದುರ್ದೈವಿಗಳು. ಮಂಕಿ ಜಾತ್ರೆಗೆಂದು ಸಾರಸ್ವತ ಕೇರಿಯ ತಾಯಿ ಮನೆಗೆ ಮಗಳೊಂದಿಗೆ ಸವಿತಾ ಬಂದಿದ್ದರು. ಜಾತ್ರೆ ಪೇಟೆಯಿಂದ ವಾಪಸ್ಸಾಗುವಾಗ ದುರ್ಘಟನೆ ನಡೆದಿದೆ. ತಾಯಿ-ಮಗಳು ಎಕ್ಟಿವಾ ಹೊಂಡಾ ದ್ವಿಚಕ್ರವಾಹನದಲ್ಲಿ ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ ನಡೆದಿದೆ.

ಮಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಬಸ್ಸಿನಡಿ ಆಕ್ಟಿವಾ ಹೊಂಡಾ ಸಿಲುಕಿ ನಜ್ಜುಗುಜ್ಜಾಗಿದೆ. ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ಬಸ್ ಡಿವೈಡರ್ ಹತ್ತಿದೆ.
ಗಂಭೀರ ಗಾಯಗೊಂಡ ತಾಯಿ-ಮಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಬಸ್ ಚಾಲಕ ಸವದತ್ತಿಯ ಫಕೀರಪ್ಪ ಬಸಪ್ಪ ವಿರುದ್ದ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.