ಹೊನ್ನಾವರ : ವಾಣಿಜ್ಯ ಬಂದರು ನಿರ್ಮಾಣ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಕಾಸರಕೋಡ ಟೊಂಕ ನಿವಾಸಿಗಳು ನಿರ್ಧರಿಸಿದ್ದ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆಯವರ ಸಲಹೆಯಂತೆ ರಾಷ್ಟ್ರೀಯ ಮೀನುಗಾರರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮತ್ತು ವಿವಿಧ ಪ್ರಮುಖರು ಕಾಸರಕೋಡ ಟೊಂಕದ ಮೀನುಗಾರರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನದ ಫಲಶ್ರುತಿಯಿಂದ ಮತದಾನ ಬಹಿಷ್ಕಾರ ಹಿಂಪಡೆಯಲಾಗಿದೆ. ಅಲ್ಲದೆ, ವಿವಿಧ ಅಧಿಕಾರಿಗಳು ಮಾಡಿದ ಮನವಿಗೆ ಸ್ಪಂದಿಸಿ ಕಾಸರಕೋಡ ಟೊಂಕದ ಮೀನುಗಾರರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ನಿರ್ಧಾರವನ್ನು ಹಿಂಪಡೆದಿದ್ದಾರೆ.
ಇದನ್ಮೂ ಓದಿ : ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವು
ಮೀನುಗಾರರ ಸಭೆಯಲ್ಲಿ ಚರ್ಚೆ ನಡೆದು ಆಡಳಿತದ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆಯವರು ಮೀನುಗಾರ ಪ್ರಮುಖರೊಂದಿಗೆ ನಡೆಸಿದ ಮಾತುಕತೆಯ ಬಗ್ಗೆ ವಿವರಿಸಲಾಯಿತು. ಜೊತೆಗೆ ಮೇ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ಯುವ ವಿಚಾರದ ಬಗ್ಗೆ ವಿವರಿಸಲಾಯಿತು. ನಂತರ ಸಭೆಯಲ್ಲಿ ಚರ್ಚೆ ನಡೆದು ಮತದಾನ ಬಹಿಷ್ಕರಿಸುವ ತೀರ್ಮಾನವನ್ನು ಹಿಂಪಡೆಯಲು ಒಮ್ಮತದಿಂದ ನಿರ್ಧಾರ ಕೈಗೊಳ್ಳಲಾಯಿತು.
ಮೀನುಗಾರರೆಲ್ಲರೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ತೀರ್ಮಾನಿಸಿದ್ದೇವೆ. ಆದರೆ ಹೋರಾಟ ನಿರಂತರವಾಗಲಿದೆ ಎಂದು ಮೀನುಗಾರರ ವಿವಿಧ ಸಂಘಟನೆಗಳ ಹೋರಾಟ ಸಮಿತಿಯ ಅಧ್ಯಕ್ಷ ರಾಜೇಶ ಗೋವಿಂದ ತಾಂಡೇಲ ಮತ್ತು ಹಮಜಾ ಪಟೇಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.