ಬೆಳಗಾವಿ : ಮಾರ್ಚ್ ೫ ರಂದು ಮಂಗಳವಾರ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟು : ೫ರಂದು ನಡ್ಡಾ ಬೆಳಗಾವಿಗೆ

ರಾಷ್ಟ್ರೀಯ ಅಧ್ಯಕ್ಷರು ಬರುತ್ತಿರುವ ಹಿನ್ನೆಲೆ ಮಾಜಿ ಸಚಿವ ಹಾಗೂ ಭಾಜಪ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರು ನಗರದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮಾರ್ಚ್ ೫ ರಂದು ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ರಾಷ್ಟ್ರೀಯ ಅಧ್ಯಕ್ಷರು, ಪಕ್ಷದ ವಿವಿಧ ಕಾರ್ಯಕ್ರಮ ಹಾಗೂ ಸಭೆಗಳಲ್ಲಿ ಭಾಗವಹಿಸುವರು.

ಇದನ್ನೂ ಓದಿ : ಲೋಕಸಭೆ ಚುನಾವಣೆ : ಬಿಜೆಪಿಯ ಮೊದಲ ಪಟ್ಟಿಯಲ್ಲಿಲ್ಲ ರಾಜ್ಯದ ಅಭ್ಯರ್ಥಿಗಳು
ಅಂದು ಬೆಳಿಗ್ಗೆ ಚಿಕ್ಕೋಡಿಯಲ್ಲಿ ನಡೆಯುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ ಬೆಳಗಾವಿ ನಗರದಲ್ಲಿ ನಡೆಯುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಭಾಗವಹಿಸುವರು. ಸಾಯಂಕಾಲ ಜಿಲ್ಲೆಯ ಪ್ರಬುದ್ಧರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಳಗಾವಿ ಜಿಲ್ಲೆಗೆ ಬರುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟು ಮಾಡಿದೆ.

ಇಂದು ದಿವಂಗತ ಡಾ.ಯು.ಚಿತ್ತರಂಜನ್ ಜನ್ಮದಿನ :  https://www.facebook.com/share/p/RQchMqiuMNxDsLgU/?mibextid=Nif5oz