ಭಟ್ಕಳ : ತನ್ನ ಮನೆಯಲ್ಲಿ ಕೆಲಸಕ್ಕೆ ಇದ್ದ 21 ವರ್ಷದ ಯುವತಿಯೊಬ್ಬಳ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುರುಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ : ಸಿಡಿಲು ಬಡಿದು ಇಬ್ಬರು ಸಾವು

ಮುರುಡೇಶ್ವರದ ಗಣೇಶ ಹರಿಕಂತ್ರ ಎಂಬುವವರ ವಿರುದ್ಧ ಆತನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ನಿರಂತರ ಅತ್ಯಾಚಾರದಿಂದ ಹೆಣ್ಣುಮಗುವಿಗೆ ಜನ್ಮ ನೀಡಿರುವುದಾಗಿ ಆರೋಪಿಸಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ದೂರಿನಲ್ಲಿ ಏನಿದೆ?
ಕಳೆದ ವರ್ಷ ಜೂನ್ ತಿಂಗಳಲ್ಲಿ ಆತನ ಹೆಂಡತಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ತಾನು ಕಸ ಗುಡಿಸುತ್ತಿದ್ದಾಗ ಅರೋಪಿ ತನ್ನನ್ನು ಹಿಂದಿನಿಂದ ಬಂದು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ನಿನ್ನ ಮೇಲೆ ಮನಸ್ಸು ಆಗಿದೆ ಎಂದು ಹೇಳಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಆಗ ತಾನು ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರೂ ಆತ ತನ್ನನ್ನು ಬಲವಂತವಾಗಿ ಬೆಡ್‌ ರೂಂಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಯಾರಿಗಾದರೂ ಹೇಳಿದರೆ ಮಾನ, ಮರ್ಯಾದೆ ತೆಗೆಯುತ್ತೇನೆ. ನಿನಗೆ ಇನ್ನೂ ಮದುವೆ ಆಗಿಲ್ಲ ಈ ವಿಷಯ ಬಹಿರಂಗವಾದರೆ ನಿನ್ನನ್ನು ಯಾರು ಮದುವೆಯಾಗುವುದಿಲ್ಲ. ನೀನು ಕೆಲಸಕ್ಕೆ ಬರುವುದು ಬಿಟ್ಟರೆ ನಿನ್ನನ್ನು ಹಾಗೂ ನಿಮ್ಮ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಸಿದ್ದಾನೆ ಎಂದು ದೂರಿದ್ದಾಳೆ. ನಂತರ ತನ್ನ ಮೇಲೆ ಹೆಂಡತಿ ಇಲ್ಲದ ಸಮಯದಲ್ಲಿ ಐದಾರು ಬಾರಿ ಅತ್ಯಾಚಾರ ಮಾಡಿ ತಾನು ಗರ್ಭಿಣಿಯಾಗುವಂತೆ ಮಾಡಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ. ಇದರ ಪರಿಣಾಮ ಕೆಲ ದಿನಗಳ ಹಿಂದೆ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ತಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಗಿ ಸಂತ್ರಸ್ತ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ. ಮುರುಡೇಶ್ವರ ಠಾಣೆಯಲ್ಲಿ ದೂರು ದಾಖಲಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.