ಕಾರವಾರ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ ೫ರಂದು ಕರಾವಳಿಯ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಜಿಲ್ಲೆಯ ಭಟ್ಕಳ, ಹೊನ್ನಾವರ ಮತ್ತು ಕುಮಟಾ ಈ ಮೂರು ತಾಲೂಕುಗಳಲ್ಲಿ ಎಲ್ಲಾ ಸರ್ಕಾರಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಕುಮಟಾ ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ ಆರ್ದ್ರಾ ಮಳೆ