ಕಾರವಾರ : ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದು (ಜುಲೈ ೧೭) ಅಂಕೋಲಾ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಮತ್ತು ಮನೆ ಹಾನಿಗೆ ೧.೨೫ ಲಕ್ಷ ರೂ. ವಿತರಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅನೇಕ ಕಡೆ ಹಾನಿಯಾಗಿದೆ. ಅಂಕೋಲಾ ತಾಲೂಕಿನ ಉಳುವರೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಹಾನಿಯಾದ ಮನೆಗಳನ್ನು ಪರಿಶೀಲಿಸಿದರು. ಮಳೆಯಿಂದ ಹಾನಿಯಾದ ಮನೆಗಳಿಗೆ ಒಂದು ಲಕ್ಷದ ಇಪತ್ತು ಸಾವಿರ ಪರಿಹಾರ ಹಣವನ್ನು ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಅಂಕೋಲಾ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ ೫ ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲಾಗಿದೆ. ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಸಿದರು. ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಉಪಸ್ಥಿತರಿದ್ದರು.
ಇದನ್ನೂ ಓದಿ : ಆಷಾಢ ಏಕಾದಶಿ ನಿಮಿತ್ತ ಲಕ್ಷ ತುಳಸಿ ಅರ್ಚನೆ
ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚೆ :
ಇದಕ್ಕೂ ಮೊದಲು ಅತಿಯಾದ ಮಳೆಯಿಂದ ಕದಂಬ ನೌಕಾನೆಲೆಯಿಂದ ಉಂಟಾಗುತ್ತಿರುವ ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನೌಕಾನೆಲೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆ ಸರಿ ಪಡಿಸುವ ಕುರಿತು ಚರ್ಚಿಸಿದರು. ನೌಕಾನೆಲೆಯಿಂದ ನೀರು ಹೊರಹೋಗದೆ ಪಕ್ಕದ ಗ್ರಾಮಗಳ ಮನೆಗಳಿಗೆ ನೀರು ತುಂಬಿ ಸಮಸ್ಯೆಯಾಗುತ್ತಿರುವ ಬಗ್ಗೆ ಚರ್ಚೆಯಾಯಿತು. ಸಭೆ ನಂತರ ಚೆಂಡಿಯಾ, ಇಡೂರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರೊಂದಿಗೆ ನೌಕಾನೆಲೆ ಸ್ಥಳಕ್ಕೆ ಸಚಿವರು ಭೇಟಿ ನೀಡಿದರು. ನೌಕಾನೆಲೆ ಅಧಿಕಾರಿಗಳ ಜೊತೆ ಸಮಸ್ಯೆ ಕುರಿತು ಚರ್ಚಿಸಿ ನೀರು ಹೊರಬಿಡುವಂತೆ ಸೂಚಿಸಿದರು.