ಹೈದ್ರಾಬಾದ್: ರಸ್ತೆ ಅಪಘಾತದಲ್ಲಿ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ.
ಇದನ್ನೂ ಓದಿ : ಮೇಲ್ಮನೆಯಲ್ಲಿ ನೀರಾ ಬಗ್ಗೆ ಸ್ವಾರಸ್ಯಕರ ಚರ್ಚೆ
ಹೈದರಾಬಾದ್ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. 37 ವರ್ಷದ ಲಾಸ್ಯ ನಂದಿತಾ ಇದೇ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ತೆಲಂಗಾಣ ವಿಧಾನಸಭೆ ಪ್ರವೇಶಿಸಿದ್ದರು.
ಇದನ್ನೂ ಓದಿ : ಆಟೊರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಿತಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿದಿಲ್ಲ. ಘಟನೆಯಲ್ಲಿ ನಂದಿತಾ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ವಿಡಿಯೋ ನೋಡಿ : ನಾಮಧಾರಿ ಪ್ರೀಮಿಯರ್ ಲೀಗ್ ಉದ್ಘಾಟನೆ https://fb.watch/qor-P0Ytb_/?mibextid=Nif5oz