ಭಟ್ಕಳ: ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಭಿಕ್ಷುಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮೀಪ ನಡೆದಿದೆ.
ಇದನ್ನೂ ಓದಿ : ಚಿತ್ರಾಪುರ ಮಹಾರಥೋತ್ಸವ ಸಂಪನ್ನ
ಧರ್ಮಸ್ಥಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಭಟ್ಕಳ ಬಸ್ ನಿಲ್ದಾಣದಿಂದ ಮುರುಡೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ರಂಗಿನಕಟ್ಟೆ ಸಮೀಪ ಬರುತ್ತಿದ್ದಂತೆ ರಸ್ತೆ ದಾಟುತ್ತಿದ್ದ ಭಿಕ್ಷುಕನಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಭಿಕ್ಷುಕನನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭಟ್ಕಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.