ಅಥಣಿ : ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ, ಸ್ಥಳೀಯ ಕಾಂಗ್ರೆಸ್ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದ್ದಾರೆ.
ಇದನ್ನೂ ಓದಿ : ಶೋಭಾ ಕರಂದ್ಲಾಜೆ ೧೩.೮೮ ಕೋಟಿ ರೂ. ಒಡತಿ
ಅಥಣಿ ತಾಲೂಕಿನ ಖಿಳೆಗಾಂವನಲ್ಲಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ಆರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇವರ ಮೇಲೆ ಮಾರಕಾಸ್ತ್ರಗಳಿಂದ ಹಠಾತ್ತನೆ ದಾಳಿ ನಡೆಸಿದ್ದಾರೆ. ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಣ್ಣಪ್ಪ ಬಸಣ್ಣ ನಿಂಬಾಳ ಅವರು ಖಿಳೇಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರು. ಸ್ಥಳೀಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿಯೂ ಇವರು ಹೆಚ್ಚು ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ : ಶೋಭಾ ಕರಂದ್ಲಾಜೆ ೧೩.೮೮ ಕೋಟಿ ರೂ. ಒಡತಿ
ಖಿಳೇಗಾಂವ-ಅಥಣಿ ರಸ್ತೆಯ ಬಳಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿದ ಪರಿಣಾಮ ಭಾರಿ ಪ್ರಮಾಣದ ರಕ್ತಸ್ರಾವ ಉಂಟಾಗಿದೆ. ಇದರಿಂದಾಗಿ ಅಣ್ಣಪ್ಪ ಬಸಣ್ಣ ನಿಂಬಾಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ಮೂ ಓದಿ : ಕೊಳವೆ ಬಾವಿಗೆ ಬಿದ್ದ ೨ ವರ್ಷದ ಮಗು
ಖಿಳೇಗಾಂವ ಗ್ರಾಮಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ರಾಜಕೀಯ ದ್ವೇಷದಿಂದಾಗಿ ಇವರನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ವೀರೇಶ್ವರ ಸ್ವಾಮೀಜಿ ಲೋಕಸಭೆ ಚುನಾವಣಾ ಕಣಕ್ಕೆ !