ಕಾರವಾರ : ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಪ್ರಿಯಾ ಕೆ. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರು ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಂಸ್ಥೆಯ ನಿರ್ದೇಶಕರಾಗಿದ್ದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಈವರೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಗಂಗೂಬಾಯಿ ಮಾನಕರ ಅವರನ್ನು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರಾಗಿ ವರ್ಗಾಯಿಸಲಾಗಿದೆ. ಅರ್ಚನಾ ಎಂಎಸ್ ಅವರ ವರ್ಗಾವಣೆಯಿಂದ ಈ ಸ್ಥಾನ ತೆರವಾಗಿದೆ. ಸದ್ಯದಲ್ಲಿಯೇ ಲಕ್ಷ್ಮಿಪ್ರಿಯಾ ಕೆ. ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲೇ ಶಿಕಾರಿಪುರದ ವ್ಯಕ್ತಿ ಸಾವು