ನವದೆಹಲಿ: ಲೋಕಸಭೆ ಚುನಾವಣೆ ಕಾವೇರುತ್ತಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ನಿಷೇದಾಜ್ಞೆ, ಬಸ್ ಪ್ರಯಾಣ ಉಚಿತ

ಈ ಬಾರಿ ಪ್ರಭಾವಿ ಸಚಿವರ ಸಂಬಂಧಿಕರಿಗೆ ಬಹುತೇಕ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೋಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ರವೀಂದ್ರ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್‌, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ : ಭಟ್ಕಳದಲ್ಲಿ ವ್ಯಕ್ತಿ ನಾಪತ್ತೆ  https://www.facebook.com/share/p/fb4cnnP9P5oz5nFf/?mibextid=oFDknk

ಲೋಕಸಭೆ ಚುನಾವಣೆ ಕಣದ ಕಾಂಗ್ರೆಸ್ ಅಭ್ಯರ್ಥಿಗಳ ವಿವರ ಕೆಳಗಿನಂತಿದೆ :
* ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
* ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
* ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌
* ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌
* ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
* ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
* ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌
* ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌
* ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
* ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
* ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌
* ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
* ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌
* ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
* ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌
* ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌
* ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ