ಯಲ್ಲಾಪುರ : ಮಾರ್ಚ್ ತಿಂಗಳಲ್ಲಿ ನಡೆದ ೨೦೨೩-೨೪ನೇ ಸಾಲಿನ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಯಲ್ಲಾಪುರದ  ವಿಶ್ವದರ್ಶನ ಪ್ರೌಢಶಾಲೆಗಳ ಫಲಿತಾಂಶ ಉತ್ತಮವಾಗಿವೆ. ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿವೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.೯೮.೪೮ ಫಲಿತಾಂಶ ದಾಖಲಿಸಿದೆ. ಒಬ್ಬ ವಿದ್ಯಾರ್ಥಿನಿ ೬೨೫ಕ್ಕೆ ೬೨೦ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ  ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿದೆ. ಅದೇ ರೀತಿ  ಇಡಗುಂದಿಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.  ಯಲ್ಲಾಪುರದ ಕನ್ನಡ ಮಾಧ್ಯಮ  ಪ್ರೌಢಶಾಲೆಯುೂ ಉತ್ತಮ ಸಾಧನೆ ಮಾಡಿದ್ದು  ಶೇ.೯೮.೨೪ ಫಲಿತಾಂಶ ಪಡೆದಿದೆ.

ಇದನ್ನೂ ಓದಿ : ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಸುಪ್ರಿಯಾ ಶಂಕರ ಗೌಡ ಆಯ್ಕೆ

ಹರಿಪ್ರಕಾಶ ಕೋಣೆಮನೆ ಸಂತಸ :

ಹರಿಪ್ರಕಾಶ ಕೋಣೆಮನೆ

ಒಟ್ಟಾರೆಯಾಗಿ ವಿಶ್ವದರ್ಶನ ಪ್ರೌಢಶಾಲೆಗಳ ಫಲಿತಾಂಶ ಉತ್ತಮವಾಗಿ ಮೂಡಿಬಂದಿದೆ. ಗ್ರಾಮೀಣ ಪ್ರದೇಶದ ಹಾಗೂ ಅನೇಕ ಬಡ ಪ್ರತಿಭಾವಂತ  ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಸಂತಸ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಧ್ಯಾರ್ಥಿಗಳಿಗೆ ಅವರು ಶುಭಹಾರೈಸಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹವು ನಿರಂತರವಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ  ಪದವಿ ಪೂರ್ವ ಕಾಲೇಜು ಇದೆ. ಇಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಅತ್ಯುತ್ತಮ ಶಿಕ್ಷಣ ಲಭ್ಯವಿದೆ. ಹತ್ತನೇ ತರಗತಿ  ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಂತ ಊರಿನಲ್ಲಿಯೇ ಮುಂದಿನ ಶಿಕ್ಷಣಕ್ಕಾಗಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.