ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂದು ಏಪ್ರಿಲ್ 16ರ ಮಂಗಳವಾರದಂದು ಚಂಡಿಕಾ ಹವನ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ : ಕಾಸರಕೋಡ ವಾಣಿಜ್ಯ ಬಂದರು ನಿರ್ಮಾಣಕ್ಕೆ ವಿರೋಧ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ. ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿ. ಬಿಜೆಪಿ ಬಹುಮತ ಪಡೆಯುವ ಅಧಿಕಾರದ ಚುಕ್ಕಾಣಿ ಹಿಡಿಯಲಿ ಎಂದು ಪ್ರಾರ್ಥಿಸಲು ಈ ಹವನ ಆಯೋಜಿಸಲಾಗಿದೆ. ಮಧ್ಯಾಹ್ನ ಮಹಾಪೂಜೆ ನಂತರ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಜರುಗಲಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಆಗಮಿಸುವಂತೆ ಬಿಜೆಪಿ ಮುಖಂಡ, ಶ್ರೀಕುಮಾರ ಸಮೂಹ ಸಂಸ್ಥೆಯ ಮುಖ್ಯಸ್ಥ ವೆಂಕ್ರಟಮಣ ಹೆಗಡೆ ಕವಲಕ್ಕಿ ಮನವಿ ಮಾಡಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.